ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್‌ ಆಗಿಲ್ವಾ? ಸಿಎಂ ಪ್ರಶ್ನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ
? ಎಂದು ಜೆಡಿಎಸ್ ಖಾರವಾಗಿ ಪ್ರಶ್ನಿಸಿದೆ. ಬೆಂಗಳೂರಿನ ಕೆ.ಆರ್‌.ಮಾರ್ಕೆಟ್‌ನಲ್ಲಿ ನಡೆದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ.

ಇದನ್ನು ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್‌ಆಗಿಲ್ವಾ? ಎಂದು ಸಮರ್ಥಿಸಿಕೊಳ್ಳುವ ನೀವು ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ಕು ಸಿದ್ದರಾಮಯ್ಯ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

 ಕರ್ನಾಟಕ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕೊಲೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇರುವುದು ರಾಜ್ಯದಲ್ಲಿ ಕುಸಿದುಬಿದ್ದಿರುವುದು ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -  - Advertisement -  - Advertisement - 
Share This Article
error: Content is protected !!
";