ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ ರವರನ್ನು ನೇಮಕ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಯಿತು.
ಬೆಂಗಳೂರು ಗ್ರಾಮಾಂತರ ಕಾಂಗ್ರೇಸ್ ಕಛೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ನವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಆರ್ ಗೌಡ ರವರು ಆದೇಶದ ನೇಮಕಾತಿ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಗು ದೊಡ್ಡಬಳ್ಳಾಪುರ ಮತ್ತು ದೆವನಹಳ್ಳಿ ತಾಲ್ಲೂಕಿನ ಎಲ್ಲಾ ಕಾಂಗ್ರೇಸ್ ಪಕ್ಷದ ಪದಾಧಿಕಾರಿಗಳು ಮುಖಂಡರು ನೂತನ ಅಧ್ಯಕ್ಷರಿಗೆ ಅಭಿನಂದಿಸಿದ್ದಾರೆ.