​ ಹೈಕೋರ್ಟ್ ಮೆಟ್ಟಿಲೇರಿದ ವಿಪ ಸದಸ್ಯ​ ರವಿಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ವಿಪ ಸದಸ್ಯ ಎನ್.ರವಿಕುಮಾರ್ ಅವರು ಅಪಮಾನಕರ ಹೇಳಿಕೆ ನೀಡಿದ್ದ ಆರೋಪದಲ್ಲಿ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ವಿಧಾನ ಪರಿಷತ್​ ಬಿಜೆಪಿ ಸದಸ್ಯ ಎನ್.​ ರವಿಕುಮಾರ್​ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement - 

ನ್ಯಾಯಾಲಯದ ಕಲಾಪ ಶುಕ್ರವಾರ ಪ್ರಾರಂಭವಾಗುತ್ತಿದ್ದಂತೆ ರವಿಕುಮಾರ್ ಪರ ವಕೀಲರು, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ಪೀಠಕ್ಕೆ ಮನವಿ ಮಾಡಿದರು. ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ತಿಳಿಸಿತು.

- Advertisement - 

ಜುಲೈ 1 ರಂದು ಬಿಜೆಪಿ ಪಕ್ಷವು ವಿಧಾನಸೌಧ ಆವರಣದ ಮಹಾತ್ಮಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್ ಅವರ ಕುರಿತು ಅಪಮಾನಕರ ಪದಗಳನ್ನು ಬಳಸಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಬಂಧ ಜೆ.ಪಿ ನಗರದ ನಿವಾಸಿ ನಂದಾದೀಪಾ, ಮಹಿಳಾ ಸಂಘದ ಅಧ್ಯಕ್ಷೆ ನಗರ್ತನಾ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ದೂರಿನಲ್ಲಿ ರವಿಕುಮಾರ್ ಅವರ ಹೇಳಿಕೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅಗೌರವ ತಂದಿದೆ.

- Advertisement - 

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಗೌರವಕ್ಕೆ ಕುಂದು ಉಂಟು ಮಾಡಿರುವುದಲ್ಲದೆ, ಇಡೀ ಮಹಿಳಾ ಕುಲಕ್ಕೆ ಅಗೌರವ ತೋರಿದಂತೆ ಆಗಿದೆ ಎಂದು ದೂರು ನೀಡಿದ್ದರು. ಆರೋಪಿತರ ಮಾತು ಲೈಂಗಿಕ ಅರ್ಥ ಛಾಯೆ ಬರುವ ಮಾತಾಗಿದೆ. ಇದು ಮುಖ್ಯಕಾರ್ಯದರ್ಶಿಯವರ ಖ್ಯಾತಿಗೆ ಹಾನಿ ಉಂಟು ಮಾಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಪೊಲೀಸರು ದೂರಿನ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ರವಿಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು. ಈ ನಡುವೆ ಎಫ್ಐಆರ್ ಪ್ರಶ್ನಿಸಿ ರವಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

 

 

Share This Article
error: Content is protected !!
";