ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಗ್ರಾಮಾಂತರ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರವಿಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಶ್ರೀ ರವಿ ಸಿದ್ದಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಶ್ರೀ ರವಿ ಸಿದ್ದಪ್ಪ ಅವರು ತಕ್ಷಣ ತೂಬಗೆರೆ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸುತ್ತೇನೆ ಎಂದು ಡಿಕೆಶಿ ಅವರು ತಿಳಿಸಿದ್ದಾರೆ.
ತೂಬಗೆರೆ ಹೋಬಳಿಯ ಹಿತರಕ್ಷಣಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಸಮಯದಲ್ಲಿ ತೂಬಗೆರೆ ಹೋಬಳಿಯ ಎಲ್ಲಾ ಗ್ರಾಮಗಳನ್ನು ಪರಿಶೀಲನೆ ಮಾಡಲಾಗಿದ್ದು ಸಮಸ್ಯೆಗಳಿಗೆ ತೂಬಗೆರೆಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗುವುದು ಸಮಗ್ರ ಅಭಿವೃದ್ದಿಗೆ ಶ್ರಮಿಸಲು ಸದಾವಕಾಶವಾಗಿದೆ .
ನೂತನ ಅಧ್ಯಕ್ಷರಿಗೆ ಹೋಬಳಿಯ ಎಲ್ಲಾ ಗ್ರಾಮದ ಯುವ ಮುಖಂಡರು ಗ್ರಾಮಸ್ಥರು ಶುಭ ಕೋರಿದ್ದಾರೆ.