ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement - 

ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.
ಇದು ಇತಿಹಾಸ ಸೃಷ್ಟಿಸಿದ ದಿನ.  ಕೊನೆಯದಾಗಿ
, ಈ ಸಲ ಕಪ್ ನಮ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ಅಭಿನಂದನೆ:
ಮಂಗಳವಾರ ರಾತ್ರಿ ಐಪಿಎಲ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸಿರುವ ಕರ್ನಾಟಕದ ಹೆಮ್ಮೆಯ ಆರ್‌ಸಿಬಿ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬುಧವಾರ ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಿರು. ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾತುರ, ಕಾಯುವಿಕೆ ಕೊನೆಗೊಂಡು, ಇಡೀ ರಾಜ್ಯದಲ್ಲೇ ಹಬ್ಬದ ವಾತಾವರಣ ಸೃಷ್ಟಿಸಿದ ಈ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿ ನೀವೂ ಭಾಗಿಯಾಗಿ ಎಂದು ಸಿಎಂ ತಿಳಿಸಿದರು.

 

- Advertisement - 

Share This Article
error: Content is protected !!
";