ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಈ ಸಲ ಕಪ್ ನಮ್ದು, ಐಪಿಎಲ್-2025 ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ ಆರ್ ಸಿಬಿ ತಂಡಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.
ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ.
ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ವಿರಾಟ್ ಕೋಹ್ಲಿ ಅವರನ್ನು ಅಭಿನಂದಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.