ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಡಿ.19ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ತಾಲ್ಲೂಕು ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಸಭಾಂಗಣದಲ್ಲಿ “ಮಕ್ಕಳೊಂದಿಗೆ ಅಹವಾಲು ಸ್ವೀಕಾರ ಕಾರ್ಯಕ್ರಮ” ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಉದ್ಘಾಟನೆ ನೆರವೇರಿಸುವರು. ತಹಶೀಲ್ದಾರ್ ಪಿ.ಎಂ.ಗೋವಿಂದ ರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್,
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ತಾ.ಪಂ. ಇಒ ವೈ.ರವಿಕುಮಾರ್, ಬಿಇಒ ಹೆಚ್.ಗಿರಿಜಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಓ.ಪರಮೇಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ ಬಾವಿಮಠ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಭರಮಸಾಗರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಪ್ರಸಾದ್, ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎ.ಎಂ.ವೀಣಾ,
ನಿರ್ಮಲ ಎಸ್.ಚಿಕ್ಕಣ್ಣನವರ್, ಸಿರಿಗೆರೆ ಮಠ ಆಡಳಿತಾಧಿಕಾರಿ ಹೆಚ್.ವಿ.ವಾಮದೇವಪ್ಪ, ಸಿರಿಗೆರೆ ಪಿಡಿಒ ಆರ್.ಉಮಾ ಭಾಗವಹಿಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಪ್ರೇಮಮೂರ್ತಿ ತಿಳಿಸಿದ್ದಾರೆ.

