ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ ವಿಭಾಗದ ಅಧಿಕಾರಿಗಳು ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

- Advertisement - 

      . 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ.  ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.

- Advertisement - 

     . 23 ರಂದು ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ.  ಪೊಲೀಸ್ ಉಪಾಧೀಕ್ಷಕರು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.

 . 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ.  ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು.

- Advertisement - 

     ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಲ್ಲಿ, ಅನಾವಶ್ಯಕ ವಿಳಂಬ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಇತ್ಯಾದಿ ವಿಷಯಗಳ ದೂರುಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ನಿಗದಿತ ನಮೂನೆ1 ಮತ್ತು 2 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share This Article
error: Content is protected !!
";