ಚಂದ್ರವಳ್ಳಿ ನ್ಯೂಸ್, ಗುಬ್ಬಿ:
ಕುಂಚಿಟಿಗ ಕ್ಷೇಮಾಭಿರುದ್ದಿ ಸಂಘದ ವತಿಯಿಂದ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಶೇ. 80ರಷ್ಟು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಎಲೆರಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠ ಪೀಠಧ್ಯಕ್ಷರಾದ ಡಾ.ಶ್ರೀ ಹನುಮಂಥನಾಥ ಮಹಾ ಸ್ವಾಮೀಜಿ, ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ್ ಹಾಲಪ್ಪ, ಬೆಂಗಳೂರು ಬಿಬಿಎಂಪಿ ಉಪ ಆಯುಕ್ತರು ಹಾಗೂ
ಒಕ್ಕಲಿಗ ದಂತ ಮಹಾ ವಿದ್ಯಾಲಯದ ಅಧ್ಯಕ್ಷ ಬೇತೂರು ಪಾಳ್ಯ ಜೆ ರಾಜು, ಗುಬ್ಬಿ ಕುಂಚಿಟಿಗ ಸಂಘದ ಅಧ್ಯಕ್ಷ ಜಯಣ್ಣ, ಹಿರಿಯೂರು ತಾಲೂಕ್ ಕುಂಚಿಟಿಗ ಸಂಘದ ಅಧ್ಯಕ್ಷ ಮೈಸೂರು ಶಿವಣ್ಣ,
ತುಮಕೂರು ಕುಂಚಿಟಿಗ ಜಿಲ್ಲಾ ಅಧ್ಯಕ್ಷ ಶ್ರೀಧರ್ ಹಾಗೂ ಜಗದೀಶ್ ಮುಂತಾದ ಕುಂಚಿಟಿಗ ಸಂಘದ ಮುಖಂಡರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸುಮಾರು 150 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.