ನೂರಾರು ಯುವಕ-ಯುವತಿಯರಿಗೆ ಸ್ಥಳದಲ್ಲೇ ನೇಮಕಾತಿ ಪತ್ರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ “ಬೃಹತ್ ಉದ್ಯೋಗ ಮೇಳ”ವನ್ನು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಸಂದರ್ಶನದಲ್ಲಿ ಯಶಸ್ವಿಯಾಗಿ ಆಯ್ಕೆಯಾದ ನೂರಾರು ಯುವಕ-ಯುವತಿಯರಿಗೆ ಸ್ಥಳದಲ್ಲೇ ನೇಮಕಾತಿ ಪತ್ರಗಳನ್ನು ವಿತರಿಸಿ, ಅವರ ಹೊಸ ಜೀವನದ ಹಾದಿಗೆ ಶುಭ ಕೋರಿದರು.

- Advertisement - 

ನಮ್ಮ ಯುವಶಕ್ತಿ ಆರ್ಥಿಕವಾಗಿ ಸದೃಢರಾಗಲು ಇಂತಹ ಮೇಳಗಳು ಸಹಕಾರಿಯಾಗಲಿ ಎಂದು ಸಚಿವ ರಾಮಲಿಂಗಾರೆಡ್ಡಿ ಶುಭ ಹಾರೈಸಿದರು.

ಸ್ಥಳೀಯ ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ, ಎಂಇಐ ಅಧ್ಯಕ್ಷ ಎಸ್.ಮನೋಹರ್ ಹಾಗೂ ಇತರ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement - 

 

 

 

Share This Article
error: Content is protected !!
";