ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕ್ಯೂ.ಆರ್.ಕೋಡ್ ಬಳಸಿ ಆನ್‍ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬೇಕು.
ಆನ್‍ಲೈನ್ ನೊಂದಣಿ ಮಾಡದಿದ್ದರೆ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಗಿ ತಿಳಿಸಿದ್ದಾರೆ.

