ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತಿದೆ.
ಈ ಹಿನ್ನಲೆಯಲ್ಲಿ ನಗರದ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಎ ವಸತಿ ನಿಲಯದಲ್ಲಿ ಸೆ.27 ರಂದು ಬೆಳ್ಳಿಗೆ 10:30 ರಿಂದ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ವೈದ್ಯಕೀಯ ಚಿಕಿತ್ಸೆಗೆ ನೊಂದಣಿ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

