ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅವಿಭಾಜಿತ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ (ಈಗ ವಿಜಯನಗರ ಜಿಲ್ಲೆ) ಭಾಗದಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ವರದಿ ಮಾಡಿಕೊಂಡು ಬಂದಿರುವ ಅಪ್ಪಟ ಗ್ರಾಮೀಣ ಪತ್ರಕರ್ತ ಭೀಮಣ್ಣ ಗಜಾಪುರ ಅವರ ಅಭಿವೃದ್ಧಿ ಪತ್ರಿಕೋದ್ಯಮ- ಕೂಡ್ಲಿಗಿ ವರದಿಗಳ ಸಂಕಲನ ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಏರ್ಪಡಿಸಿದೆ.
ನಗರದ ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯ ಸಭಾಂಗಣದಲ್ಲಿ ಆ.12 ಮಂಗಳವಾರ (ಇಂದು) ಬೆಳಗ್ಗೆ 11.15 ಗಂಟೆಗೆ ವರದಿಗಳ ಸಂಕಲನ ಕೃತಿಯನ್ನ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಕೃತಿ ಲೋಕಾರ್ಪಣೆಗೊಳಿಸುವರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷರಾದ ಬಿ.ಬಿ.ಮಲ್ಲಿಕಾರ್ಜುನಯ್ಯ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತು ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ಅವರು ಭಾಗವಹಿಸಲಿದ್ದಾರೆ.
ಕೃತಿ ಕತೃ ಪತ್ರಕರ್ತ ಭೀಮಣ್ಣ ಗಜಾಪುರ ಮತ್ತು ಹಿರಿಯ ಪತ್ರಕರ್ತ ಹುಡೇಂ ಕೃಷ್ಣಮೂರ್ತಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

