ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ರಂಭಾಪುರಿ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಪವಿತ್ರ ಸಾನಿಧ್ಯದಲ್ಲಿ, ಸನಾತನ ಸಂಸ್ಕೃತಿಯ ಗಂಗೋತ್ರಿಯಂತಿರುವ ಶ್ರೀಕ್ಷೇತ್ರ ಬಾಳೆಹೊನ್ನೂರಿನಲ್ಲಿ ನಡೆದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಶ್ರೀ ವೀರಭದ್ರಸ್ವಾಮಿಯ ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪಾಲ್ಗೊಂಡು ಮಾತನಾಡಿದರು. ಸಮಾರಂಭದಲ್ಲಿ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಪಡೆದ ಹಿರಿಯ ಸಾಧಕ ರವಿ ಹಂಜರವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಶ್ರೀ ರಂಭಾಪುರಿ ಪೀಠ ಧಾರ್ಮಿಕ, ಆಧ್ಯಾತ್ಮಿಕ, ಸನಾತನ ಸಂಸ್ಕೃತಿಯ ಜೊತೆಗೆ ಸಾಮಾಜಿಕ ಸಾಮರಸ್ಯದ ಮೂಲ ಕೇಂದ್ರವೂ ಆಗಿದ್ದು, ಪೂಜ್ಯ ಗುರುಗಳ ಮಾರ್ಗದರ್ಶನದಲ್ಲಿ ನಾಡಿನ ಏಳಿಗೆಗೆ ಶ್ರಮಿಸುವ ಸಂಕಲ್ಪವನ್ನು ಪುನರುಚ್ಚರಿಸಲಾಯಿತು ಎಂದು ಅವರು ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಡಾ. ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಪೂಜ್ಯ ಶ್ರೀ ಡಾ. ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ರಾಜೇಗೌಡ, ಪಕ್ಷದ ಹಾಸನ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಮಾಜಿ ಶಾಸಕ ಜೀವರಾಜ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";