ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಅವರ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಶನಿವಾರ ವಜಾಗೊಳಿಸಿ ಆದೇಶಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ, ಮತ್ತೊಬ್ಬ ಆರೋಪಿ ಅನುಕುಮಾರ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಪವಿತ್ರಾ ಗೌಡ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸೆಬಾಸ್ಟಿಯನ್, ಪವಿತ್ರಾಗೌಡಗೂ ದರ್ಶನ್​ಗೆ ಒಂದು ರೀತಿಯ ಸಂಬಂಧ ಇರಬಹುದು. ಆದರೆ ರೇಣುಕಾಸ್ವಾಮಿ ಕೊಲೆಯಲ್ಲಿ ‌ಪವಿತ್ರಾಗೌಡ ಯಾವುದೇ ಪಾತ್ರ ವಹಿಸಿಲ್ಲ ಮತ್ತು ಮಹಿಳೆ ಎಂಬ ಕಾರಣಕ್ಕೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಚಿತ್ರದುರ್ಗದ ರೇಣುಕಾ ಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಜೂನ್ 9 ರಂದು ಭೀಕರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ನಟ ದರ್ಶನ್​ ಹಾಗೂ ಅವರ ಗ್ಯಾಂಗ್ ಜೈಲು ಪಾಲಾಗಿದನ್ನು ಸ್ಮರಿಸಬಹುದಾಗಿದೆ.

 

 

- Advertisement -  - Advertisement -  - Advertisement - 
Share This Article
error: Content is protected !!
";