ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಸಡಗರ ಸಂಭ್ರಮದಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಅಧ್ಯಕ್ಷೆ ಯಶೋದಮ್ಮ ಹನುಮಂತೇಗೌಡ ಮಾತನಾಡಿ ನಾವುಗಳೆಲ್ಲರೂ ವಿಶೇಷವಾಗಿ ವಿದ್ಯಾರ್ಥಿಗಳು ಗಣ ರಾಜ್ಯೋತ್ಸವ ದಿನವನ್ನು ಹಬ್ಬದಂತೆ ಉತ್ಸಾಹದಿಂದ ಆಚರಿಸಬೇಕು ಎಂದು ಹೇಳಿದರು.
ಬಿಎಡ್ ಕಾಲೇಜು ಪ್ರಾಂಶುಪಾಲ ಪ್ರೊ ಜಿ. ಕೃಷ್ಣಮೂರ್ತಿ ಮಾತನಾಡಿ ಗಣರಾಜ್ಯೋತ್ಸವ ನಮ್ಮ ರಾಷ್ಟ್ರೀಯ ಭಾವೈಕ್ಯತೆ ಸಾರುವ ಸಾರ್ವಭೌಮತ್ವ ಪ್ರತಿಪಾದಿಸುವ ಹಬ್ಬ ಎಂದು ಹೇಳಿದರು.
ಪದವಿ ಪೂರ್ವ ಮತ್ತು ಪದವಿ ಕಾಲೇಜು ಪ್ರಾಂಶುಪಾಲ ಎಂ.ಸಿ. ಮಂಜುನಾಥ್ ಮಾತನಾಡಿ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಪ್ರಪಂಚದ ದೊಡ್ಡದಾದ ಲಿಖಿತ ಸಂವಿಧಾನ ನಮ್ಮದು ಈ ಸಂವಿಧಾನದ ಆಶಯಗಳಿಗೆ ತಕ್ಕಂತೆ ನಾವು ಕಾರ್ಯನಿರ್ವಹಣೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅರುಣ್ ಕುಮಾರ್ ಎಲ್ಲಾ ವಿಭಾಗಗಳ ಶಿಕ್ಷಕರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

