ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ತಿರುಮನಗೊಂಡಹಳ್ಳಿಯಲ್ಲಿ ರೈಲ್ವೆ ಗೇಟ್ ಇದ್ದು, ಇದರಿಂದ ಕ್ಷೇತ್ರಕ್ಕೆ ಬರುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ತಿರುಮಗೊಂಡಹಳ್ಳಿ ರೈಲ್ವೆ ಗೇಟ್ ನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣರವರಿಗೆ ಘಾಟಿ ಪ್ರಾಧಿಕಾರದ ಸದಸ್ಯರು ಮನವಿ ಮಾಡಿದರು.
ಕರ್ನಾಟಕ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಸಹ ಒಂದಾಗಿದೆ, ನಾಗಾರಾಧನೆ ಕ್ಷೇತ್ರವಾಗಿರುವುದರಿಂದ ಪ್ರತಿದಿನ ಕ್ಷೇತ್ರಕ್ಕೆ ಸಾವಿರಾರು ಭಕ್ತರು ಭೇಟಿ ನೀಡುವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ.
ಘಾಟಿ ಕ್ಷೇತ್ರದ ಬಳಿಯ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಸನ್ಮಾನ್ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿತ್ತು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ ಭಾಗವಹಿಸಿದ್ದರು, ಈ ವೇಳೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ತಿರುಮನಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಮನವಿ ಮಾಡಿದರು.

