ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅಂಗನವಾಡಿ ಸಹಾಯಕರು ಮತ್ತು ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಲು ಸುಪ್ರೀಂ ಕೋರ್ಟ್ ತೀರ್ಪಿನಂತೆ ಕ್ರಮ ವಹಿಸಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿತು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಹಿರಿಯೂರು ಶಾಖೆ ವತಿಯಿಂದ ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತೆಯರು ಗ್ರಾಚ್ಯುಟಿ ಪಾವತಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ಸುಪ್ರೀಂ ಕೋರ್ಟ್ ತೀರ್ಪು: ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ವಿವಿಧ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಿವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಬೇಕು ಎಂಬುದೇ ಇವರ ಮುಖ್ಯ ಬೇಡಿಕೆಯಾಗಿದೆ ಎಂದರು.
2011ರಿಂದ ನಿವೃತ್ತಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೂ ಗ್ರಾಚ್ಯುಟಿ ನೀಡುವಂತೆ ಒತ್ತಾಯಿಸಿ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಪಿ ನಿರ್ಮಲ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು.
ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರಾಜ್ಯ ಸರಕಾರ ಉಪಧನ ನೀಡಬೇಕಿತ್ತು. ಆದರೆ, 2023ರಿಂದ ನಿವೃತ್ತಿಯಾದವರಿಗೆ ಮಾತ್ರ ಗ್ರಾಚ್ಯುಟಿ ನೀಡುತ್ತಿದ್ದು, ಇದರಿಂದ ಉಳಿದ ಕಾರ್ಯಕರ್ತೆಯರಿಗೆ ಅನ್ಯಾಯವಾಗುತ್ತಿದೆ. ಕಾರಣ ಎಲ್ಲರಿಗೂ ಗ್ರಾಚ್ಯುಟಿ ನೀಡಬೇಕು ಎಂದು ಅವರು ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಸಂಘದ ಉಪಾಧ್ಯಕ್ಷೆ ಅನುಸೂಯ, ಜಯಮ್ಮ, ಕಾರ್ಯದರ್ಶಿ ಕ್ರಿಸ್ಟಿ ಜೋನಿಟ. ಜೆ, ಖಜಾಂಚಿ ಎಸ್.ಕವಿತಾ, ಡಿ.ಹೇಮಲತಾ, ಲಕ್ಷ್ಮಿ, ಸುವರ್ಣಮ್ಮ, ಮಂಜಮ್ಮ, ಲಕ್ಷ್ಮಿದೇವಿ ಮತ್ತಿತರರು ಇದ್ದರು.

