ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಕಲಾ ತಂಡಗಳ ಒದಗಿಸಲು ಮನವಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರದಲ್ಲಿ ಆಯೋಜಿಸಲಾಗುತ್ತಿರುವ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತಂಡಗಳನ್ನು ಕಳುಹಿಸಿಕೊಡುವಂತೆ
, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ತಂಡ ಮನವಿ ಮಾಡಿತು.

ಸಂಘದ ಮನವಿ ಸ್ವೀಕರಿಸಿ ಮಾತನಾಡಿದ ನಿರ್ದೇಶಕಿ ಗಾಯತ್ರಿ ಅವರು, ಕಲಾ ತಂಡಗಳನ್ನು ನೀಡುವುದಾಗಿ ಭರವಸೆ ನೀಡಿದ್ದಲ್ಲದೆ, ಸಮ್ಮೇಳನಕ್ಕೆ ಶುಭ ಹಾರೈಸಿದರು.
ಬೀದರ್ ಜಿಲ್ಲಾ ಘಕದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ
, ಅಪ್ಪಾರಾವ ಸೌದಿ, ಶಿವಕುಮಾರ ಸ್ವಾಮಿ, ನಂದಕುಮಾರ ಕರಂಜಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";