ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತರು “www.rbi.org.in/“ ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of Assistant – Panel Year 2025” ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ “www.rbi.org.in” ಎಂಬ ಬ್ಯಾಂಕಿನ ಜಾಲತಾಣವನ್ನು ಮಾತ್ರ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

