ಚಂದ್ರವಳ್ಳಿ ನ್ಯೂಸ್, ಶಿರಾ:
ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕು ನಾದೂರು ಗ್ರಾಮದ ರೇಷ್ಮಾ ಕೆ. ಅವರಿಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಿಹೆಚ್ಡಿ ಪದವಿ ನೀಡಿ ಗೌರವಿಸಲಾಗಿದೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರೇಷ್ಮಾ ಅವರಿಗೆ ಪದವಿ ಪ್ರದಾನ ಮಾಡಿದರು.
ಸಿರಾ ತಾಲ್ಲೂಕು ನಾದೂರು ಗ್ರಾಮದ ಕೆ. ಕಾಂತರಾಜು ಮತ್ತು ಸಿದ್ದಗಂಗಮ್ಮ ದಂಪತಿಗಳ ಪುತ್ರಿ ಕೃಷಿಯಲ್ಲಿ ಎಂಎಸ್ಸಿ ಪದವಿ ಪಡೆದಿದ್ದು, ಇವರು ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನ ಶಾಸ್ತ್ರದಲ್ಲಿ ಮಾಡಿದ ಸಂಶೋಧನಾ ಅಧ್ಯಯನಕ್ಕಾಗಿ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪಿಹೆಚ್ಡಿ ಪದವಿ ನೀಡಿ ಗೌರವಿಸಿದೆ.
ವಿವಿಯ ಘಟಿಕೋತ್ಸವದಲ್ಲಿ ರಾಜ್ಯಪಾಲರು ಕು. ರೇಷ್ಮಾ ಅವರಿಗೆ ಚಿನ್ನದ ಪದಕದೊಂದಿಗೆ ಪಿಹೆಚ್ಡಿ ಪದವಿ ಪ್ರದಾನ ಮಾಡಿ ಪ್ರೋತ್ಸಾಹಿಸಿದರು.