ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ ಹೊರಟ್ಟಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ರಾಜಕಾರಣಿ ಬಸವರಾಜ್‌ಹೊರಟ್ಟಿ ಅವರು ತಮ್ಮ
ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರ ಹರಿದಾಡುತ್ತದ್ದು ವೈರಲ್ ಆಗಿದೆ.

ಹೊರಟ್ಟಿ ಅವರ ರಾಜೀನಾಮೆ ಪತ್ರ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ರಾಜೀನಾಮೆ ಪತ್ರದಲ್ಲಿ ಮಾರ್ಚ್ 18 ಎನ್ನುವ ದಿನಾಂಕ ನಮೂದಾಗಿದೆ. ಹಾಗೇ ಪತ್ರದಲ್ಲಿ ಹೊರಟ್ಟಿ ಅವರ ಸಹಿ ಸಹ ಇಲ್ಲ ಎನ್ನುವುದು ಮುಖ್ಯ.
ಹೀಗಾಗಿ ರಾಜೀನಾಮೆ ಪತ್ರ ಹಲವು ಗೊಂದಲಗಳಿಗೆ ಕಾರಣವಾಗಿದ್ದು ರಾಜಕೀಯದಲ್ಲಿ ಯಾವ ರೀತಿಯ ತಿರುವು ಪಡೆಯಲಿದೆ ಎನ್ನುವುದು ಕಾದುನೋಡಬೇಕಿದೆ.
ಪತ್ರದಲ್ಲಿ ಏನಿದೆ
?

ಬಸವರಾಜ್ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಮಾರ್ಚ್ 23 ರಂದು ಬೆಳಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ  ರವಾನಿಸಿರುವ ಸಾಧ್ಯತೆ ಇದ್ದು ಆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ.

ಹೊರಟ್ಟಿ ಅವರು ಮಾರ್ಚ್​ 18ರಂದೇ ರಾಜೀನಾಮೆ ಪತ್ರವನ್ನು ಪ್ರಾಣೇಶ್ ಅವರಿಗೆ ಕಳುಹಿಸಿದ್ದು, ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜೀನಾಮೆ
ಪತ್ರದಲ್ಲಿ ಹೊರಟ್ಟಿ ಅವರ ಸಹಿ ಇಲ್ಲದಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಇವತ್ತಿನ ರಾಜಕಾರಣಿಗಳನ್ನು ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಹಾಗೂ ನಾನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ಇಂದಿನ ದಿನಗಳಲ್ಲಿ ಸದನಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಅರ್ಥವಾಗಿದೆ ಎಂದು ಹೊರಟ್ಟಿ ಅವರು ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮಗಳ ಮುಂದೆ ಬೇಸರ ವ್ಯಕ್ತಪಡಿಸಿದ್ದರು.

ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಾಪತಿಗೆ ಹೇಳೋದಿಲ್ಲ ಕೇಳೋದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್​ಗೆ ಪ್ಲೇ ಕಾರ್ಡ್‌ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಮೊನ್ನೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಸದನದಲ್ಲಿ ಯಾರೂ ಗೌರವ ಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿ ಬೇಸರ ಹೊರಹಾಕಿದರು.

 

Share This Article
error: Content is protected !!
";