ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ದ್ಯಾಪನಹಳ್ಳಿ ಮೂಲದ ಭರಮಸಾಗರ ಗ್ರಾಮದ ನಿವಾಸಿ ನಿವೃತ್ತ ಮುಖ್ಯಶಿಕ್ಷಕ ವಿ.ವೆಂಕಟಸ್ವಾಮಿ (76) ಸೆ.25 ರಂದು ವಯೋಸಹಜ ಕಾರಣದಿಂದ ನಿಧನ ಹೊಂದಿದ್ದಾರೆ.
ಹೋಬಳಿಯ ವಿವಿಧ ಶಾಲೆಗಳಲ್ಲಿ ಶಿಕ್ಷಕ ಹಾಗೂ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿ ನಂತರ ಭರಮಸಾಗರದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಇವರ ನಿಧನಕ್ಕೆ ಕುಟುಂಬದವರು ಹೋಬಳಿ ಶಿಕ್ಷಕ ವೃಂದ, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದ್ಯಾಪನಹಳ್ಳಿಯಲ್ಲಿ ಜರುಗಿತು. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಹಾಗೂ ಮಿತ್ರರನ್ನು ಅಗಲಿದ್ದಾರೆ.

