ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಲಸೆ ನೀತಿಗಳಿಂದಾಗಿ ಅಮೆರಿಕದ ಹಲವು ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡುತ್ತಿರುವ ಭಾರತದ ವಿದ್ಯಾರ್ಥಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ ಎಂದು ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದೆ.
ಕೆಲ ಕಾಲೇಜುಗಳ ಬಿಗಿ ನಿಯಮಗಳಿಂದಾಗಿ ರಜೆಯ ಸಂದರ್ಭದಲ್ಲೂ ವಿದ್ಯಾರ್ಥಿಗಳು ಭಾರತಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ.
ಡೊನಾಲ್ಡ್ ಟ್ರಂಪ್ ಸರಕಾರ ವೀಸಾ ಹಾಗೂ ವಲಸೆ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಿದೆ. ಇದರಿಂದಾಗಿ ಕಾಲೇಜುಗಳು ವಿದ್ಯಾರ್ಥಿಗಳಿಗೆ ದೇಶ ತೊರೆಯದಂತೆ ಸೂಚನೆ ನೀಡಿವೆ ಎಂದು ಕಾಂಗ್ರೆಸ್ ಅಚ್ಚರಿ ವ್ಯಕ್ತಪಡಿಸಿದೆ.