ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ವಿವಿಧ ಹೆದ್ದಾರಿ ಯೋಜನೆಗಳು ಹಾಗೂ ಮೂಲಸೌಕರ್ಯಗಳ ಕುರಿತಂತೆ ಸಂಸತ್ ಭವನದ ಕಚೇರಿಯಲ್ಲಿ ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಭೇಟಿಯಾಗಿ ಚರ್ಚೆ ನಡೆಸಲಾಯಿತು.
ಮಾಜಿ ಮಂತ್ರಿ ಹೆಚ್.ಡಿ. ರೇವಣ್ಣ, ಕೋಲಾರ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರು ಜತೆಯಲ್ಲಿದ್ದರು.

