ಕೋಗಿಲು ಬಡಾವಣೆ ಆರೋಪಿಗಳಿಗೆ ಕಂದಾಯ ಸಚಿವರ ಕಿಡಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ.

ಕೋಗಿಲು ಪ್ರದೇಶವನ್ನ ನಾವೇ ಒತ್ತುವರಿ ಮಾಡಿಸಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದು ಕಂದಾಯ ಸಚಿವರು ತರಾಟೆ ತೆಗೆದುಕೊಂಡಿದ್ದಾರೆ.

- Advertisement - 

ಬಿಜೆಪಿಯವರು ಮತ್ತೊಂದು ಗಂಭೀರ ಆರೋಪ ಮಾಡಿದ್ದು ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಹೇಳುತ್ತಿದ್ದಾರೆ.

ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು ಕೇಂದ್ರ ಸರ್ಕಾರಕ್ಕೆ ಹೊಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಫೇಲ್ಯೂರ್​​ ವಿರುದ್ಧ ಬಿಜೆಪಿ ಹೋರಾಡುತ್ತಿದೆ ಎಂದು ಸಚಿವ ಕೃಷ್ಣಬೈರೇಗೌಡರು ವ್ಯಂಗ್ಯವಾಡಿದ್ದಾರೆ.

- Advertisement - 

 

Share This Article
error: Content is protected !!
";