ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು ಅಲ್ಟ್ರಾ ಟೆಕ್ ಸಿಮೆಂಟ್ ಸುಜ್ಞಾನ ದೀಪಿಕಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ “ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ”ವನ್ನು ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದ ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರಾದ
ಡಾ ಹೆಚ್ ಜಿ ವಿಜಯಕುಮಾರ್ ರವರು ಅತಿವೇಗವಾಗಿ ವಾಹನಗಳ ಚಲಾವಣೆ ಮಾಡುವುದರಿಂದ ಲಿವಿಂಗ್ ಮಾಡುವುದರಿಂದ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದರೆ ಅಪಘಾತ ಸಂಭವಿಸಿ ಪ್ರಾಣಹಾನಿ ಸಂಭವಿಸುತ್ತದೆ ಎಂದು ಹೇಳಿದರು.
ಜೊತೆಗೆ ಇತ್ತಿಚೆಗೆ ಯುವಕರೇ ಹೆಚ್ಚಾಗಿ ಅಪಘಾತ ದಿಂದ ಸಾಯುತ್ತಿದ್ದಾರೆ ಎಂದು ಹೇಳಿದರು ಅದುದರಿಂದ ಯುವಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಅಪಘಾತ ಸಂಭವಿಸದಂತೆ ತಡೆಯಬಹುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿದರು ಸುಜ್ಞಾನ ದೀಪಿಕಾ ಸಂಸ್ಥೆಯ ನಿರ್ದೇಶಕರಾದ ಎಂ ಎಸ್ ಮಂಜುನಾಥ್ ರಸ್ತೆ ಸುರಕ್ಷತಾ ನಿಯಮದ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವ ಮುಖಾಂತರ ವಿದ್ಯಾರ್ಥಿಗಳ ಮನಮುಟ್ಟುವಂತೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಅಲ್ಟ್ರಾ ಟೆಕ್ ಸಿಮೆಂಟ್ ಕಾರ್ಖಾನೆಯ ಜನರಲ್ ಮ್ಯಾನೇಜರ್ ಪಂಕಜ್ ಶರ್ಮಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಆರ್ ನಾರಾಯಣ ಸ್ವಾಮಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಾಳಯ್ಯ ಕೃಷ್ಣಪ್ಪ ಉಪನ್ಯಾಸಕರಾದ ಪುನೀತ್ ಜಿತೇಂದ್ರ ಮಿಥುನ್ ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.