ರೌಡಿ ಶೀಟರ್ ಹೈದರ್‌ ಅಲಿ ಬರ್ಬರ ಹತ್ಯೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೌಡಿಶೀಟರ್‌ ಓರ್ವನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ತಡರಾತ್ರಿ ಬೆಂಗಳೂರಿನ ಅಶೋಕ ನಗರ ಠಾಣೆ ವ್ಯಾಪ್ತಿಯ ಫುಟ್‌ಬಾಲ್ ಸ್ಟೇಡಿಯಂ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ರೌಡಿ ಶೀಟರ್ ಹೈದರ್‌ಅಲಿ(
38) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಬಾರ್ ಆ್ಯಂಡ್ ರೆಸ್ಟೋರೆಂಟ್‌ನಿಂದ ಹೊರಬಂದ ಹೈದರ್‌ಅಲಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿದ 2-3 ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಹೈದರ್ ಅಲಿ ಜೊತೆಗಿದ್ದ ಸ್ನೇಹಿತನ ಮೇಲೂ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು ಗಾಯಗೊಂಡಿದ್ದಾನೆ.

- Advertisement - 

ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹೈದರ್ ಅಲಿ, ಅಶೋಕ ನಗರ ಠಾಣೆಯ ರೌಡಿಶೀಟರ್ ಆಗಿದ್ದ. 2014ರಿಂದ ಈತನ ವಿರುದ್ಧ 11 ಪ್ರಕರಣಗಳಿವೆ. 2022ರ ನಂತರ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗಿದ್ದು ಆತನ ಸಹೋದರ ರಾಜಕೀಯ ಪಕ್ಷವೊಂದರ ಜೊತೆ ಗುರುತಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ರೌಡಿಶೀಟರ್ ಹೈದರ್ ಅಲಿ ಸ್ನೇಹಿತನೊಂದಿಗೆ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಿಂದ ತಡರಾತ್ರಿ ಹೊರಬಂದಿದ್ದು ಆನೆಪಾಳ್ಯದಲ್ಲಿರುವ ತನ್ನ ಮನೆಯತ್ತ ಕಾರಿನಲ್ಲಿ ಹೊರಟಿದ್ದ. ಅದೇ ಸಂದರ್ಭದಲ್ಲಿ ಅಡ್ಡಗಟ್ಟಿದ್ದ ದುಷ್ಕರ್ಮಿಗಳ‌ಗುಂಪು ಮಾರಕಾಸ್ತ್ರಗಳಿಂದ ಹೈದರ್ ಅಲಿ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ಮಾಡಿದೆ. ತಕ್ಷಣ ಸ್ಥಳೀಯರ ನೆರವಿನಿಂದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಸಾವನ್ನಪ್ಪಿದ್ದಾನೆ. ವಿಚಾರ ತಿಳಿದು ಆಸ್ಪತ್ರೆ ಬಳಿ ಜಮಾಯಿಸಿದ್ದ ಬೆಂಬಲಿಗರು ಆಸ್ಪತ್ರೆಯ ಗೇಟ್ ತಳ್ಳಿ ಆಕ್ರೋಶ ಹೊರಹಾಕಿದ ಪ್ರಸಂಗ ನಡೆದಿದೆ.

- Advertisement - 

ಮೃತ ಹೈದರ್ ಅಲಿ ಸ್ನೇಹಿತನಿಂದ ದೂರು ಪಡೆದು ಅಶೋಕ ನಗರ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.

Share This Article
error: Content is protected !!
";