ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿದೆ.
ಕಾರ್ಯಕ್ರಮದ ಆಯೋಜಕರಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕೂಡ ತನ್ನ ವಿರುದ್ಧದ ಎಫ್‌ಐಆರ್ ಅನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿ ಸಲ್ಲಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಲೀಕ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಲಿಮಿಟೆಡ್ ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ. ಆರ್‌ಸಿಬಿ ಸಂಭ್ರಮಾಚರಣೆಗೆ ಸೀಮಿತ ಪಾಸ್‌ಗಳು ಮಾತ್ರ ಲಭ್ಯವಿದೆ ಎಂದು RCSL ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ತಿಳಿಸಿತ್ತು ಎಂದು ಅರ್ಜಿಯಲ್ಲಿ ಹೇಳಿದೆ.
ಉಚಿತ ಪಾಸ್‌ಗಳಿಗೂ ಸಹ ಪ್ರವೇಶಕ್ಕೆ ಪೂರ್ವ ನೋಂದಣಿ ಕಡ್ಡಾಯ ಎಂದು ಹೇಳಲಾಗಿತ್ತು. ಮಧ್ಯಾಹ್ನ 1.45ಕ್ಕೆ ತೆರೆಯಬೇಕಿದ್ದ ಕ್ರೀಡಾಂಗಣದ ಗೇಟ್‌ಗಳನ್ನು ಮಧ್ಯಾಹ್ನ 3 ಗಂಟೆಗೆ ತೆರೆಯಲಾಗಿದ್ದು, ಇದರಿಂದಾಗಿ ಜನಸಂದಣಿ ಹೆಚ್ಚಾಗಿದೆ ಎಂದು ಅದು ಆರೋಪಿಸಿದೆ.
ಕಾರ್ಯಕ್ರಮ ನಿರ್ವಹಣಾ ಸಂಸ್ಥೆಯ ಪ್ರಕಾರ, ಪೊಲೀಸರ ಜನಸಂದಣಿ ನಿರ್ವಹಣೆಯ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ ಎಎನ್ನಲಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜೂನ್ 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದನ್ನು ಸ್ಮರಿಸಬಹುದಾಗಿದೆ.