ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆಯೋಲೆ ನೀಡಿ ಆತ್ಮೀಯವಾಗಿ ಆಹ್ವಾನಿಸಿದರು.
ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ.ಧರಣೀದೇವಿ ಅವರು ಈ ವೇಳೆ ಉಪಸ್ಥಿತರಿದ್ದರು.