ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಸೇವಲಾಲ್ ಸಮುದಾಯ ಭವನದಲ್ಲಿ ಸಂತ ಸೇವಾಲಾಲ್ ಮಹಾರಾಜರವರ 287ನೇ ಜಯಂತೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಡಿ ಸುಧಾಕರ್ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ನಂತರ ಮಾತನಾಡಿ ಸಮಾನತೆ, ಶಾಂತಿ ಮತ್ತು ಮಾನವೀಯ ಮೌಲ್ಯಗಳ ಬೋಧನೆ ಮಾಡಿದ ಸಂತ ಶ್ರೀ ಸೇವಲಾಲ್ ಮಹಾರಾಜರ ಆದರ್ಶಗಳು ಸಮಾಜಕ್ಕೆ ಸದಾ ಪ್ರೇರಣೆಯಾಗಿವೆ. ಅವರ ಸಂದೇಶಗಳು ನಮ್ಮ ಸಮಾಜವನ್ನು ಸುಧಾರಣೆಯ ದಾರಿಯಲ್ಲಿ ಮುನ್ನಡೆಸಲಿ ಎಂಬುದು ನಮ್ಮ ಸಂಕಲ್ಪ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಖಾದಿ ರಮೇಶ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆರ್.ನಾಗೇಂದ್ರ ನಾಯ್ಕ್, ನಗರ ಸಭೆ ಪೌರಾಯುಕ್ತ ಎ.ವಾಸೀಂ, ರವಿಚಂದ್ರ ನಾಯ್ಕ್, ಅನಿಲ್, ಸೇವಾಲಾಲ್ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಮುದಾಯದವರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

