ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಲ್ಲಾ ಮಕ್ಕಳ ನಿರ್ದೇಶನಾಲಯದ ವತಿಯಿಂದ ನವೆಂಬರ್–2024ರ ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ.
ಇದರ ಅಂಗವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಪೂರ್ವ ಕೆ.ಆರ್.ಪುರಂ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ–2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಬಹುದು.
ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ” ಮಾಡಬಹುದಾಗಿದೆ.
ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಸಾರ್ವಜನಿಕರು ಜಿಲ್ಲಾ ಮಕ್ಕಳ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಪೂರ್ವ ಕೆ.ಆರ್.ಪುರಂ ದೂರವಾಣಿ ಸಂಖ್ಯೆ: 080-29904132ನ್ನು ಸಂಪರ್ಕಿಸುವಂತೆ ಬೆಂಗಳೂರು ಪೂರ್ವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.