ಮುಂಬೈ ಫಲಿತಾಂಶದಂತೆ ಇಲ್ಲೂ ಅದೇ ಫಲಿತಾಂಶ ಬರಲಿದೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬೆಂಗಳೂರಿನ ಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಲಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್‌ಪಕ್ಷದ ಪತನದ ಹಾದಿ ಆರಂಭವಾಗುವುದು ನಿಶ್ಚಿತ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಈಗ ಪ್ರತಿಷ್ಠಿತ ಬಿಎಂಸಿ ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಜಯಭೇರಿ ಬಾರಿಸಿವೆ. ಇದರೊಂದಿಗೆ ಜನತೆ ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ.

- Advertisement - 

ಈ ಐತಿಹಾಸಿಕ ವಿಜಯದ ರೂವಾರಿಗಳಾದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರ ಬಿಜೆಪಿಯ ಎಲ್ಲ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";