ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಮೊಳಕಾಲ್ಮೂರು ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಗುರುವಾರ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಮರಳು ಸಮಿತಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ತಾಲ್ಲೂಕುಮಟ್ಟದ ಮರಳು ಸಮಿತಿ ಸದಸ್ಯ ಕಾರ್ಯದರ್ಶಿ ತಹಶೀಲ್ದಾರ್ ಜಗದೀಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.