ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶ್ರೀಗಂಧ ಬೆಳೆಗಾರರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ಭೂಮಿಯಲ್ಲಿ ಬೆಳೆಯುವ ಶ್ರೀಗಂಧ ಮರಗಳ ಮೌಲ್ಯಧಾರಣೆಯನ್ನು ವೈಜ್ಞಾನಿಕವಾಗಿ ನಿರ್ಧರಿಸಲು ತೋಟಗಾರಿಕೆ ಇಲಾಖೆಗೆ ನೀಡುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರ ನಾರಾಯಣ ಹಾಗೂ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯವರೊಂದಿಗೆ ಕೆ.ಅಮರನಾರಾಯಣ ಅವರ ತಂಡದಲ್ಲಿದ್ದ ಪದಾಧಿಕಾರಿಗಳ ಜೊತೆ ಚರ್ಚಿಸಿ ಸಮಾಲೋಚನೆ ನಡೆಸಿದರು.

ಶ್ರೀಗಂಧದ ಮರಗಳು ಅಧಿಕ ಸಂಖ್ಯೆಯಲ್ಲಿ ಕಳ್ಳತನವಾಗುತ್ತಿವೆ ಹಾಗೂ ವಿದೇಶಗಳಿಗೆ ರಫ್ತಾಗುತ್ತಿವೆ. ಇದರ ಹಿಂದಿರುವ ಮಾಫಿಯಾ ಕಂಡು ಹಿಡಿಯುವಂತೆ ಹಾಗೂ ಬೆಳೆಗಾರರು ಬೆಳೆ ರಕ್ಷಣೆಗೆ ಹಾಗೂ ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ಅನುಮತಿ ನೀಡುವಂತೆ ನಿಯೋಗದ ಸದಸ್ಯರು ಒತ್ತಾಯಿಸಿದರು.

ಜೊತೆಗೆ ಅರಣ್ಯದಲ್ಲಿರುವ ಶ್ರೀಗಂಧದ ಮರಗಳನ್ನು ಮಾತ್ರ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡಿಸಿ, ತೋಟದಲ್ಲಿ ಬೆಳೆಯುವ ಮರಗಳನ್ನು ತೋಟಗಾರಿಕಾ ಇಲಾಖೆಯ ವ್ಯಾಪ್ತಿಗೆ ಒಳಪಡಿಸುವಂತೆ ಹಾಗೂ ತಮ್ಮ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಪದಾಧಿಕಾರಿಗಳು ಮನವಿಪತ್ರ ಸಲ್ಲಿಸಿ ಒತ್ತಾಯಿಸಿದರು.

 

Share This Article
error: Content is protected !!
";