ಚಂದ್ರವಳ್ಳಿ ನ್ಯೂಸ್, ವಿಜಯಪುರ:
ಹೋರಾಟದಲ್ಲಿ ಭಾಗಿಯಾಗಿದ್ದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಂಗನ ಬಸವ ಸ್ವಾಮೀಜಿ ಮೊಬೈಲ್ ಕಸಿದಿದ್ದಾರೆ.
ಇದರಿಂದ ಕೋಪಗೊಂಡ ಸ್ವಾಮೀಜಿ ಪೊಲೀಸ್ ಯೂನಿಫಾರ್ಮ್ ಧರಿಸಿರದ ಪಿಎಸ್ಐ ಸೀತಾರಾಮ್ ಲಮಾಣಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ನಾನು ತಪ್ಪು ಮಾಡಿಲ್ಲ, ಕರೆ ಮಾಡುತ್ತೇನೆಂದರೂ ಮೊಬೈಲ್ ಕಸಿದರು ಎಂದು ಸಂಗನಬಸವ ಸ್ವಾಮೀಜಿ ಹೇಳಿದ್ದಾರೆ.
ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮಫ್ತಿಯಲ್ಲಿದ್ದ ಪಿಎಸ್ಐಗೆ ಸ್ವಾಮೀಜಿ ಕಪಾಳಮೋಕ್ಷ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸೊಲ್ಲಾಪುರ ರಸ್ತೆಯಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ನಿವಾಸಕ್ಕೆ ಹೋರಾಟಗಾರರು ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಪೊಲೀಸರು ಸ್ವಾಮೀಜಿ ಬೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಸಿಟ್ಟಾದ ಅವರು ಪೊಲೀಸ್ ಅಧಿಕಾರಿ ಕೆನ್ನೆಗೆ ಬಾರಿಸಿದ ಘಟನೆ ನಡೆದಿದೆ ಎನ್ನಲಾಗಿದೆ.
ಏನಿದು ಘಟನೆ?
ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜು ಸ್ಥಾಪನೆಗೆ ವಿರೋಧಿಸಿ ಕಳೆದ ನೂರಾರು ದಿನಗಳಿಂದ ಹೋರಾಟ ನಡೆದುಕೊಂಡುಬಂದಿದೆ. ಇದರ ಭಾಗವಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹೋರಾಟ ಸಮಿತಿ ಮತ್ತು ಇತರ ಸಂಘಟನೆಗಳು ಉಸ್ತುವಾರಿ ಸಚಿವರ ಮನೆ ಮುತ್ತಿಗೆ ಯತ್ನ ನಡೆಸಿವೆ.
ಈ ವೇಳೆ ಹೋರಾಟಗಾರರನ್ನು ವಿಜಯಪುರ-ಸೊಲ್ಲಾಪುರ ರಸ್ತೆಯಲ್ಲಿಯೇ ಪೊಲೀಸರು ತಡೆದಿದ್ದು, ರಸ್ತೆ ಮಧ್ಯ ಹೋರಾಟ ಮಾಡದಂತೆ ಮನವಿ ಮಾಡಿದ್ದಾರೆ.
ಜೊತೆಗೆ ಹೋರಾಟದಲ್ಲಿ ಭಾಗಿಯಾಗಿದ್ದ ಬಸವನಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಂಗನಬಸವ ಸ್ವಾಮೀಜಿ ಮೊಬೈಲ್ ಕಸಿದಿದ್ದಾರೆ. ಇದರಿಂದ ಕೋಪಗೊಂಡ ಸ್ವಾಮೀಜಿ ಪೊಲೀಸ್ ಯೂನಿಫಾರ್ಮ್ ಧರಿಸಿರದ ಪಿಎಸ್ಐ ಸೀತಾರಾಮ್ ಲಮಾಣಿಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ನಾನು ತಪ್ಪು ಮಾಡಿಲ್ಲ, ಕರೆ ಮಾಡುತ್ತೇನೆಂದರೂ ಮೊಬೈಲ್ ಕಸಿದರು ಎಂದು ಸಂಗನಬಸವ ಸ್ವಾಮೀಜಿ ಹೇಳಿದ್ದಾರೆ.
ಆದರೆ ಪೊಲೀಸರು ಶ್ರೀಗಳನ್ನು ಎಳೆದು ತಮ್ಮ ವಾಹನದಲ್ಲಿ ಕೂರಿಸಿದ್ದಾರೆ. ಕರ್ತವ್ಯ ನಿರತ ಅಧಿಕಾರಿ ಮೇಲೆ ಸ್ವಾಮೀಜಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದು, ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಬಳಿಕ ಎಲ್ಲ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಜೀಪ್ ಹತ್ತಿಸಿದ್ದಾರೆ.

