ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ ಖಾನಾಪುರ ತಾಲ್ಲೂಕಿನ ನಂದಗಡಕ್ಕೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ, ವೀರಭೂಮಿಯಲ್ಲಿನ ರಾಯಣ್ಣ ವಸ್ತು ಸಂಗ್ರಹಾಲಯವನ್ನು ಮತ್ತು ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ, ಬಳಿಕ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.
ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಗ್ಯಾರಂಟಿ ಅನುಷ್ಠಾನಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಗೂ ಅಪಾರ ಸಂಖ್ಯೆಯಲ್ಲಿ ರಾಯಣ್ಣನ ಅಭಿಮಾನಿಗಳು ಹಾಜರಿದ್ದರು.

