ಹಾಲು ಉತ್ಪಾದಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕ ಯತ್ನ-ಸಂಜೀವಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಹಕಾರ ಯೂನಿಯನ್ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದ ಶಿಮುಲ್ ಮತ್ತು ಯೂನಿಯನ್ ಬ್ಯಾಂಕ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಅವರನ್ನು ಹಿರಿಯೂರು ತಾಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸನ್ಮಾನಿಸಿ ಗೌರವಿಸಿದರು.

ಶಿಮುಲ್ ಹಾಗೂ ಯೂನಿಯನ್ ಬ್ಯಾಂಕ್ ನಿರ್ದೇಶಕ ಬಿ.ಸಿ ಸಂಜೀವಮೂರ್ತಿ ಸನ್ಮಾನ ಸ್ವೀಕರಿಸಿ ಮಾತನಾಡಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಸಹಕಾರದಿಂದ ಯೂನಿಯನ್ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಲು ಸಾಧ್ಯವಾಯಿತು. ಹಾಲು ಉತ್ಪಾದಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಮಾಣಿಕ ಪ್ರಯತ್ನ ಮಾಡುವುದಲ್ಲದೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ ಅವರು ಶಿಕ್ಷಣ, ಸಹಕಾರ ಸಂಘಗಳ ಬದಲಾವಣೆ ಸೇರಿದಂತೆ ಆಡಳಿತ ಯಾವ ರೀತಿ ನಡೆಸಬೇಕು ಇದರಿಂದ ರೈತರಿಗೆ ಯಾವ ರೀತಿ ಅನುಕೂಲವಾಗಲಿದೆ ಈಗೆ ಉತ್ತಮವಾದ ಕೆಲಸಗಳನ್ನು ನಿರ್ವಹಿಸಬೇಕೆಂಬ ಬದಲಾವಣೆಯ ಹೊಸ ರೂಪ ತರಲು ಪ್ರಾಮಾಣಿಕತೆಯಿಂದ ಪ್ರಯತ್ನ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

- Advertisement - 

ಕಾನೂನು, ನಿಯಮಗಳ ಜೊತೆಗೆ ಯಾವ ರೀತಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಹೋಗಬೇಕು ಎಂಬ ಏಕೈಕ ಉದ್ದೇಶದಿಂದ ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕಾಯಿತು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಕ್ಕವ್ವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಸೆಲ್ವಿ, ರಮ್ಯಾಜಯಲಲಿತಾ, ಭಾಗ್ಯಮ್ಮ, ಭಾರತಿ, ಮುಖಂಡರಾದ ಚಳ್ಳಕೆರೆಯ ರಾಜಣ್ಣ, ನಿರಂಜನ್ ಮೂರ್ತಿ, ಸುರೇಶ್ ಬಾಬು ಸೇರಿದಂತೆ ಹಾಲು ಉತ್ಪಾದಕರ ಸಂಘಗಳ ಕಾರ್ಯದರ್ಶಿಗಳು ಭಾಗವಹಿಸಿದ್ದರು.

- Advertisement - 

ನಗರದ ಅನ್ನಪೂರ್ಣೇಶ್ವರಿ ಹೋಟೆಲ್ ಸಭಾಂಗಣದಲ್ಲಿ ತಾಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಸೋಮವಾರ ನಡೆಯಿತು.

ಸಭೆ ಉದ್ದೇಶಿಸಿ ಶಿಮುಲ್ ನಿರ್ದೇಶಕ ಬಿಸಿ. ಸಂಜೀವಮೂರ್ತಿ ಮಾತನಾಡಿ  ತಾಲೂಕಿನ ಹಾಲು ಉತ್ಪಾದಕರ ಸಂಘಗಳಿಗೆ ಸಂಬಂಧಿಸಿದಂತೆ ಹಸುಗಳಿಗೆ ಬೇಕಾದ ಬೂಸಾ ಸಮಸ್ಯೆಯನ್ನು ತುರ್ತಾಗಿ ಬದಲಾವಣೆಯೊಂದಿಗೆ ಸಮಸ್ಯೆ ಬಗೆಹರಿಸಿ, ಉತ್ಪಾದಕರಿಗೆ ಬೇಕಾಗಿರುವ ಮಿಲ್ಕ್ ಮಿಷಿನ್, ಚಾಪ್ ಕಟ್ಟರ್ ಮ್ಯಾಟ್ ಶಿಘ್ರದಲ್ಲೇ ವಿತರಣೆ ಮಾಡಲಾಗುವುದು.

ಈ ಬಾರಿ ಚಳ್ಳಕೆರೆಯಲ್ಲಿ ಸಹಕಾರ ಸಪ್ತಾಹ ಆಚರಣೆಯನ್ನು ವಿಶೇಷವಾಗಿ ಮಾಡಲಾಗುವುದು. ಕಾರ್ಯಕ್ರಮಕ್ಕೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಸಮವಸ್ತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಮುಲ್ ವಿಸ್ತರಣಾಧಿಕಾರಿ ಕೃಷ್ಣಕುಮಾರ್, ಸಹಾಯಕ ನಿರ್ದೇಶಕ ಎಂ. ಪುಟ್ಟರಾಜು, ಪಶುವೈದ್ಯ ದೀರಾಜ್ ಪ್ರಕಾಶ್ ಜಿ ಸೇರಿದಂತೆ ಮತ್ತಿತರರು ಹಾಜರಿದ್ದರು.

 

Share This Article
error: Content is protected !!
";