ಸರೋಜಾದೇವಿ ಅವರ ನಿಧನ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನ ವಾರ್ತೆ ತಿಳಿದು ಮನಸ್ಸಿಗೆ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.

- Advertisement - 

ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ ಎಂದು ಸಿಎಂ ಹೇಳಿದ್ದಾರೆ.

ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಸಿದ್ದರಾಮಯ್ಯ ನನ್ನ ಸಂತಾಪಗಳನ್ನು ತಿಳಿಸಿದ್ದಾರೆ.

- Advertisement - 

 

 

Share This Article
error: Content is protected !!
";