ಇಂದು ದಶವಾರ ಗ್ರಾಮದಲ್ಲಿ ಸರೋಜಾದೇವಿ ಅವರ ಅಂತ್ಯಕ್ರಿಯೆ

News Desk

ಚಂದ್ರವಳ್ಳಿ ನ್ಯೂಸ್, ರಾಮನಗರ:
ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ನಟಿ ಬಿ.ಸರೋಜಾದೇವಿ(
87) ನಿಧನರಾಗಿದ್ದು ಅವರ ಹುಟ್ಟೂರಾದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಮಂಗಳವಾರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬಿ.ಸರೋಜಾದೇವಿ ಅವರು ಮೂಲತಃ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದವರಾಗಿದ್ದು, ಗ್ರಾಮದಲ್ಲಿ ಅವರಿಗೆ ಮನೆ ಹಾಗು ಜಮೀನು ಇದೆ. ಇದಲ್ಲದೆ ಗ್ರಾಮದಲ್ಲಿ ಐದು ಶಾಲಾ ಕಟ್ಟಡ ನಿರ್ಮಾಣಕ್ಕೆ ನೆರವು ನೀಡಿದ್ದರು.

- Advertisement - 

ಸರೋಜಾದೇವಿ ಅವರ ತಾಯಿ ರುದ್ರಮ್ಮ ಅವರ ಅಂತ್ಯಸಂಸ್ಕಾರವನ್ನು ಇದೇ ಗ್ರಾಮದಲ್ಲಿರುವ ಅವರ ಜಮೀನಿನಲ್ಲಿ ನೆರವೇರಿಸಲಾಗಿತ್ತು. ತಾಯಿಯ ಸಮಾಧಿಯ ಪಕ್ಕದಲ್ಲೇ ಸರೋಜಾದೇವಿ ಅವರ ಅಂತ್ಯಸಂಸ್ಕಾರವನ್ನೂ ಕುಟುಂಬಸ್ಥರು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಸಂಬಂಧಿಕರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ, ಹುಟ್ಟೂರಿನಲ್ಲಿ ಗ್ರಾಮಸ್ಥರು ಸರೋಜಾದೇವಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಬಿ.ಸರೋಜಾದೇವಿ ಪುತ್ರ ಗೌತಮ್ ಮಾತನಾಡಿ ಅಂತ್ಯಸಂಸ್ಕಾರಕ್ಕೆ ಮಂಗಳವಾರ ಬೆಳಗ್ಗೆ 11.30ಕ್ಕೆ ಹೊರಡುತ್ತೇವೆ. ಚನ್ನಪಟ್ಟಣ ತಾಲೂಕಿನ ಕಣ್ವ ಡ್ಯಾಂನ ದಶವಾರದಲ್ಲಿ ಅಂತ್ಯಸಂಸ್ಕಾರ ಮಾಡುತ್ತೇವೆ. ಒಕ್ಕಲಿಗ ಸಂಪ್ರದಾಯದಂತೆ ವಿಧಿ-ವಿಧಾನಗಳು ನಡೆಯಲಿವೆ ಎಂದು ತಿಳಿಸಿದರು.

- Advertisement - 

ಸೋಮವಾರ ಬೆಳಗ್ಗೆ 8.30ಕ್ಕೆ ತಾಯಿ ನಿಧನರಾದರು. ಮಲ್ಲೇಶ್ವರಂ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

 

Share This Article
error: Content is protected !!
";