ಸರ್ಕಾರಿ ಶಾಲೆ ಉಳಿಸಿ–ಕನ್ನಡ ಬೆಳೆಸಿ ಅಭಿಯಾನಕ್ಕೆ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸರ್ಕಾರಿ ಶಾಲೆಗಳಲ್ಲಿ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಭವಿಷ್ಯ ಹಿನ್ನಡೆಯಾಗುತ್ತದೆ ಎಂಬ ಪೋಷಕರ ಧೋರಣೆ ಬೇಸರದ ಸಂಗತಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನವ ಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಸರ್ಕಾರಿ ಶಾಲೆ ಉಳಿಸಿ ಕನ್ನಡ ಬೆಳೆಸಿ” ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು.

- Advertisement - 

ನಾನು ಸಹ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದ ವಿದ್ಯಾರ್ಥಿ. ಪ್ರಾಥಮಿಕದಿಂದ ಹತ್ತನೇ ತರಗತಿವರೆಗೆ ಕನ್ನಡದಲ್ಲೇ ಓದಿದ್ದೇನೆ. ಕನ್ನಡ ಮಾಧ್ಯಮ ಯಶಸ್ಸಿಗೆ ಅಡ್ಡಿಯಾಗುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅನುಭವ. ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಸ್ಥಳೀಯ ಭಾಷೆಯಲ್ಲಿಯೇ ಓದಿ ಯುಪಿಎಸ್‌ಸಿ ಸೇರಿದಂತೆ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುತ್ತಿದ್ದಾರೆ. ಇದು ಮಾತೃಭಾಷೆಯಲ್ಲಿಯೇ ಉನ್ನತ ವಿದ್ಯೆ ಸಾಧಿಸಬಹುದೆಂಬ ಜೀವಂತ ಸಾಕ್ಷ್ಯ,” ಎಂದರು.

 ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ  ಸನ್ಮಾನಿಸಿ ಗೌರವಿಸಲಾಯಿತು ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು,ಕರ್ನಾಟಕ ಯುವಶಕ್ತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

- Advertisement - 

 

 

Share This Article
error: Content is protected !!
";