ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಸುಂದರ ಪ್ರಕೃತಿಯನ್ನು ನಾಶ ಮಾಡಿ, ಕೆರೆಗಳನ್ನು ಹಾಳು ಮಾಡಿ, ಅವೈಜ್ಞಾನಿಕ ಮೇಲ್ಸೇತುವೆಗಳನ್ನು ನಿರ್ಮಿಸಲು ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿರುವ
ಹಿನ್ನೆಲೆಯಲ್ಲಿ ಶನಿವಾರ ಕೆರೆಯ ಸಂರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಸರ್ಕಾರದ ಅಧಿಕಾರಿಗಳೊಂದಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸ್ಯಾಂಕಿ ಕೆರೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮತ್ತು ಬೆಂಗಳೂರು ಉತ್ತರ ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರುಗಳಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್, ಕೆ.ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಪರಿಸರ ಪ್ರೇಮಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು.


