ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕೋಗಿಲು ಉಳಿಸಿ – ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಘೋಷವಾಕ್ಯದೊಂದಿಗೆ ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡದ ನೆಲ, ಜಲದ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಹೇಸದ ನಾಡದ್ರೋಹಿ ಕಾಂಗ್ರೆಸ್ ಪಕ್ಷ, ಇಂದು ನಮ್ಮದೇ ರಾಜ್ಯದ ಬಡ ನಿರಾಶ್ರಿತರ ಕಣ್ಣಿಗೆ ಸುಣ್ಣ ಹಚ್ಚಿ, ಪರಾರಾಜ್ಯದ ಅಕ್ರಮ ವಲಸಿಗರ ಕಣ್ಣಿಗೆ ಬೆಣ್ಣೆ ಹಚ್ಚಲು ಹೊರಟಿದೆ. ಸ್ವಂತ ಸೂರಿಲ್ಲದೆ, ನಿವೇಶನವಿಲ್ಲದೆ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡು ಕಾಯುತ್ತಿರುವ ನಮ್ಮ ರಾಜ್ಯದ ಲಕ್ಷಾಂತರ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮುದಾಯಗಳ ಬಡವರಿಗೆ ಅನ್ಯಾಯ ಆಗಲು ಬಿಜೆಪಿ ಪಕ್ಷ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಕೋಗಿಲು ಲೇಔಟ್ ನಲ್ಲಿ ಸರ್ಕಾರಿ ಜಾಗ ಅತಿಕ್ರಮಿಸಿಕೊಂಡು, ಕಾನೂನು ಬಾಹಿರವಾಗಿ ನಿರ್ಮಾಣ ಮಾಡಲಾಗಿದ್ದ ಮನೆಗಳನ್ನು ನೆಲಸಮ ಮಾಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಆದೇಶದಂತೆ ಅಕ್ರಮ ವಲಸಿಗರಿಗೆ ರಾಜ್ಯ ಸರ್ಕಾರವೇ ಹೊಸ ಮನೆಗಳನ್ನು ನಿರ್ಮಿಸಿ ಕೊಡಲು ಮುಂದಾಗಿರುವುದನ್ನು ಒಪ್ಪುವುದು ಸಾಧ್ಯವೇ ಇಲ್ಲ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕೀಯ, ತುಘಲಕ್ ಆಡಳಿತ ವಿರೋಧಿಸಿ ಸಾರ್ವಜನಿಕರ ಆಕ್ರೋಶಕ್ಕೆ ಧ್ವನಿಯಾಗಿ, ಬೆಂಗಳೂರಿನಲ್ಲಿ, ಪಕ್ಷದ ವತಿಯಿಂದ “ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ರಾಜ್ಯಕ್ಕೆ, ಕನ್ನಡಿಗರಿಗೆ ಮಾರಿ, ವಲಸಿಗರಿಗೆ, ಅಲ್ಪಸಂಖ್ಯಾತರಿಗೆ ಉಪಕಾರಿ‘ ಧೋರಣೆ ಕೈಬಿಡುವಂತೆ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರುಗಳಾದ ಡಾ.ಅಶ್ವಥ್ ನಾರಾಯಣ್, ಎಸ್.ಆರ್ ವಿಶ್ವನಾಥ್, ಉದಯ ಗರುಡ, ಕೆ.ಗೋಪಾಲಯ್ಯ, ಸಿ. ಕೆ ರಾಮಮೂರ್ತಿ,

ಮುನಿರತ್ನ, ರವಿ ಸುಬ್ರಮಣ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿ ಕುಮಾರ್, ವಿಧಾನ ಪರಿಷತ್‌ಸದಸ್ಯರುಗಳಾದ ಸಿ.ಟಿ ರವಿ, ಭಾರತಿ.ಶೆಟ್ಟಿ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಸತ್ಯಶೋಧನಾ ಸಮಿತಿ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

