ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಫೆ.04ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಶಾಸಕ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು.
ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಸವಿತಾ ಸಮಾಜ ಅಧ್ಯಕ್ಷ ಎನ್.ಚಂದ್ರಶೇಖರ್, ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸ್,
ತಾಲ್ಲೂಕು ಅಧ್ಯಕ್ಷ ಆರ್.ಶ್ರೀನಿವಾಸ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಆರ್.ನಾಗರಾಜ್ ಸೇರಿದಂತೆ ಸವಿತಾ ಸಮಾಜದ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಉಪನ್ಯಾಸ ನೀಡುವರು. ಓ.ಮೂರ್ತಿ ಮತ್ತು ಸಂಗಡಿಗರು ಗೀತಗಾಯನ ನಡೆಸಿಕೊಡುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.