ಸವಿತಾ ಸಮಾಜ ಸಂಕುಚಿತ ಭಾವನೆಯಿಂದ ಹೊರಬರಬೇಕು: ಶಾಸಕ ರಘುಮುರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸಮಾಜದ ಎಲ್ಲಾ ವರ್ಗದ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವಲ್ಲಿ ಅನೇಕ ಮಹರ್ಷಿಗಳು ತಮ್ಮದೆಯಾದ ಸೇವೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯೂ ಸಮಾಜಕ್ಕಾಗಿ ಸೇವೆ ಮಾಡಬೇಕೆಂಬ ಸಂಕಲ್ಪವನ್ನು ಮಾಡಿಸುವಲ್ಲಿ ಸವಿತಾಮಹರ್ಷಿಗಳು ಎಲ್ಲರಿಗೂ ಸ್ಪೂರ್ತಿಯಾಗುತ್ತಾರೆ.

ಸವಿತಾಮಹರ್ಷಿಗಳ ಆದರ್ಶ ಪಾಲನೆಗೆ ನಾವೆಲ್ಲರೂ ಒತ್ತು ನೀಡಬೇಕೆಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿಗಳ ಜಯಂತಿ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಪ್ಪನಮನ ಅರ್ಪಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಮಾಜದಲ್ಲಿ ಆಳಾವಾಗಿ ಬೇರೂರಿದ್ದ ಸಂಕುಚಿತ ಭಾವನೆಗಳನ್ನು ಹೋಗಲಾಡಿಸಲು ಸವಿತಾಮಹರ್ಷಿಗಳು ತಮ್ಮದೇಯಾದ ವಿಶೇಷ ಕಾರ್ಯಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ. ನಾಡಿನ ಸವಿತಾಸಮಾಜದ ದೈವವಾದ ಸವಿತಾಮಹರ್ಷಿಗಳ ಜಯಂತಿ ಆಚರಣೆ ಸರ್ಕಾರ ಅನುವು ಮಾಡಿಕೊಟ್ಟಿರುವುದು ಸಂತಸ ವಿಷಯ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿರಸ್ತೇದಾರ್ ಸದಾಶಿವಪ್ಪ, ಸರ್ಕಾರ ಅನೇಕ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳನ್ನು ಆಚರಣೆ ಮಾಡುವ ಮೂಲಕ ಅವರು ನಾಡಿಗೆ ಸಲ್ಲಿಸಿದ ಸೇವೆಯ ಬಗ್ಗೆ ನೆನಪಿಸಿಕೊಳ್ಳುವಂತಹ ಅವಕಾಶವನ್ನು ಎಲ್ಲರಿಗೂ ಮಾಡಿಕೊಟ್ಟಿದೆ. ಸವಿತಾಮಹರ್ಷಿಗಳು ಸಹ ಧಾರ್ಮಿಕ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದವರು. ಸಮಾಜzಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುವಲ್ಲಿ ಅವರು ಯಶಸ್ವಿ ಹೆಜ್ಜೆ ಇಟ್ಟಿದ್ದರು ಎಂದರು.

ಇಒ ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮಭರಮಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯ ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಸವಿತಾಸಮಾಜದ ಅಧ್ಯಕ್ಷ ರಾಜು, ಮುಖಂಡರಾದ ಮಂಜುನಾಥ, ನಾಗರಾಜ, ಓಬಣ್ಣ, ಲಕ್ಷ್ಮಣ ಮುಂತಾದವರು ಉಪಸ್ಥಿತರಿದ್ದರು.

Share This Article
error: Content is protected !!
";