ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರೊಂದು ಮಧ್ಯರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ರಾತ್ರಿ 12 ಗಂಟೆ ಸುಮಾರಿಗೆ ಚಂದಾಪುರದ ಬಳಿ ಯೂಟರ್ನ್ ತೆಗೆದುಕೊಳ್ಳುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ತಕ್ಷಣವೇ ಕೆಳಗಿಳಿದು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

