ಸೆ.12: ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತಮಟೆ ಚಳವಳಿ

khushihost

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಒಳಮೀಸಲಾತಿ ನೀಡುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದರು. ಆದರೆ ಒಳಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂಕೋರ್ಟ್‌ ಈಗ ತೆರೆ ಎಳೆದಿದೆ. ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ರೀ ಆದೇಶವನ್ನು ಅನುಷ್ಠಾನಗೊಳಿಸದೆ ನಿದ್ದೆ ಹೊಡೆಯುತ್ತಿದೆ. ಆದ್ದರಿಂದ

ಸರ್ಕಾರವನ್ನು ಬಡಿದೆಬ್ಬಿಸಲು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತಮಟೆ ಚಳವಳಿಯನ್ನು ಸೆ. 12ರಂದು ಹಮ್ಮಿಕೊಂಡಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ,

ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದೆ. ಮತ್ತು ಈ ತೀರ್ಪುನ್ನು ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ಹೇಳಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನವಾದ ಜೂನ್ 19 ನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ

ಆಚರಿಸಬೇಕು. ಮತ್ತು ಪ್ರೊ.ಬಿ.ಕೃಷ್ಣಪ್ಪ ನವರಿಗೆ “ಕರ್ನಾಟಕ ರತ್ನ * ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಬೇಕು‌ ಎಂದು ಆಗ್ರಹಿಸಿದ ಅವರು, ಬಾಕಿ ಉಳಿದಿರುವ “ಬ್ಯಾಕ್‌ ಲಾಗ್” ಹುದ್ದೆಗಳನ್ನು ರಾಜ್ಯ ಸರ್ಕಾರ ತಕ್ಷಣವೇ ಭರ್ತಿ ಮಾಡಬೇಕು. ಒಳಮೀಸಲಾತಿ ಜಾರಿಯಾಗುವವರೆಗೂ ರಾಜ್ಯ ಸರ್ಕಾರದ ಎಲ್ಲಾ ಹೊಸ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು ಎಂದರು..

ಬಗರ್ ಹುಕುಂ ಸಾಗುವಳಿ ಯನ್ನು ಸಕ್ರಮಗೊಳಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಹೊರ ಸಂಪನ್ಮೂಲದಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

- Advertisement -  - Advertisement -  - Advertisement - 
Share This Article
error: Content is protected !!
";