ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅರ್ಥಶಾಸ್ತ್ರ ವಿಷಯಕ್ಕೆ 6364 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದೆ. ಅರ್ಥಶಾಸ್ತ್ರ ವಿಷಯಕ್ಕೆ 6660 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಈ ಪೈಕಿ 6364 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 296 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದ್ದಾರೆ.

