ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀಯುತ ನಾಗೇಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕಳೆದ 3ವರ್ಷಗಳಿಂದ ಜನಜಾಗೃತಿ ವೇದಿಕೆಯಲ್ಲಿ ಸದಸ್ಯರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾಗಿ ನಾಗೇಶ್ ರವರನ್ನು ಆಯ್ಕೆ ಮಾಡಲಾಗಿದೆ. ಇವರ ಸೇವೆ ನಮ್ಮ ಜಿಲ್ಲೆಯ ಜನತೆಗೆ ಮತ್ತಷ್ಟು ಸಿಗಲಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.
ನಾಗೇಶ್ ರವರು ದೊಡ್ಡಬಳ್ಳಾಪುರ ಫೋಟೋಗ್ರಫಿ ಮತ್ತು ವೀಡಿಯೊಗ್ರಪಿ ಸಂಘದ ರಾಜ್ಯಾಧ್ಯಕ್ಷರಾಗಿ,ಸಂಸ್ಕೃತಿ ಟ್ರಸ್ಟ್ ನಿರ್ದೇಶಕರಾಗಿ, ಬೈರವೇಶ್ವರ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸದಸ್ಯರಾಗಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಅವರ ಉತ್ತಮ ನಡವಳಿಕೆ,ನಾಯಕತ್ವದ ಗುಣ, ಕಾರ್ಯ ವೈಖರಿಯನ್ನು ಗುರುತಿಸಿ ಜನಜಾಗೃತಿ ವೇದಿಕೆಯಲ್ಲಿ ಈ ನೂತನ ಜವಾಬ್ದಾರಿ ನೀಡಿ ಗೌರವಿಸಿರುವುದು ನಮ್ಮಲ್ಲರ ಹೆಮ್ಮೆ ಎಂದು ಸಮಿತಿಯ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನನಗೆ ನೂತನ ಜವಾಬ್ದಾರಿಯನ್ನು ನೀಡಿದ್ದು, ಜಿಲ್ಲಾ ಹಾಗೂ ಎಲ್ಲಾ ತಾಲ್ಲೂಕು ಸಮಿತಿಗಳ ಸಲಹೆ ಸೂಚನೆ ಪಡೆದು ಮತ್ತಷ್ಟು ಉತ್ತಮ ಸೇವೆ ಸಲ್ಲಿಸಲು, ಜನಜಾಗೃತಿ ವೇದಿಕೆಯ ಘನತೆ ಯನ್ನು ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಜಿಲ್ಲೆಯ ಜನಜಾಗೃತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ರವರಿಗೆ ಜಿಲ್ಲಾನಿರ್ದೇಶಕರು,ಯೋಜನಾಧಿಕಾರಿಗಳು, ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಸಮಿತಿಯ ಪದಾಧಿಕಾರಿಗಳು ಶುಭಕೋರಿದ್ದಾರೆ.

