ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಎಲ್.ಆರ್.ವಸತಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿ ಎಲ್.ಹೆಚ್.ಅಭಿ ಅವರು ಬೆಂಗಳೂರಿನಲ್ಲಿ ನಡೆದ 17 ವರ್ಷದ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟ ಉದ್ದ ಜಿಗಿತ ಸ್ಪರ್ಧೆಯಲ್ಲಿ 6.81 ಮೀ. ಜಿಗಿಯುವ ಮೂಲಕ ರಾಜ್ಯಮಟ್ಟದಲ್ಲಿ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ಡಿಸೆಂಬರ್ 13 ರಿಂದ 18 ರವರೆಗೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿ ಎಲ್.ಹೆಚ್.ಅಭಿ ಅವರಿಗೆ,
ತರಳಬಾಳು ಸ್ಪೋಟ್ರ್ಸ್ ಅಕಾಡೆಮಿ ಹಾಗೂ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೆಚ್.ವಿ.ನವೀನ್ ಅವರ ಪ್ರೋತ್ಸಾಹಕ್ಕೆ ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗಿರಿಜಾ, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್ ಹಾಗೂ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಡಿ.ಸುರೇಶ್ ಅಭಿನಂದಿಸಿದ್ದಾರೆ.

